ಹೆಂಡತಿ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಗಂಡ
ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಕ್ಕಳನ್ನು ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂ
ಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

