ಹುಬ್ಬಳ್ಳಿ: ನಗರದ ತಾರೀಹಾಳ್ ಬ್ರಿಜ್ ಮೇಲೆ ಸೋಮವಾರ ಬೆಳಂಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುವನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

