ವಿನಯ್ ಕುಲಕರ್ಣಿಗೆ ಜಾಮೀನು: ಹುಬ್ಬಳ್ಳಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಹುಬ್ಬಳ್ಳಿ: ಶಾಸಕ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಹಾಗೂ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

