ಕುಂದುಗೋಳ: ತಾಲೂಕಿನ ಹಿರೆಯರ್ಕುಣಿ ಗ್ರಾಮದ ಹೊಲಕ್ಕೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ನ ಹಿಂದಿನ ಹುಕ್ ಕಟ್ಟಾಗಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ರೈತ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

