ಹುಬ್ಬಳ್ಳಿ: ನಗರದಲ್ಲಿ ಮತ್ತೊಮ್ಮೆ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಐದು ಜನರ ತಂಡ ರಾತ್ರಿ ವೇಳೆ ವಿವಿಧ ಬಡಾವಣೆಗಳಲ್ಲಿ ಸುತ್ತಾಡುತ್ತಿದ್ದು, ಮನೆಗಳ ಮುಂದೆ ಅಳವಡಿಸಿರುವ ನೀರಿನ ಮೀಟರ್ಗಳು, ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಆಟೋ ರಿಕ್ಷಾಗಳ ಸ್ಟೆಪ್ನಿ, ಟೂಲ್ ಕಿಟ್ ಸೇರಿದಂತೆ ಇತರೆ ವಸ್ತುಗಳನ್ನು ಕಳ್ಳತನ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಸ್ಥಳೀಯ ನಿವಾಸಿಗಳು ಕೂಡ ಈ ತಂಡದ ಚಲನವಲನವನ್ನು ಗಮನಿಸಿ ಕೆಲ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಕಳ್ಳರ ನಿರಂತರ ಹಾವಳಿಯಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾತ್ರಿ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಈ ಕಳ್ಳರ ತಂಡವನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ. ನಾಗರಿಕರು ತಮ್ಮ ಮನೆಗಳು ಹಾಗೂ ವಾಹನಗಳ ಭದ್ರತೆಯ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಪೊಲೀಸರು ಸಹ ಸೂಚನೆ ನೀಡುವ ಅಗತ್ಯವಿದೆ.

