ಹಾವೇರಿ: ಕಳ್ಳತನವಾಗಿದ್ದ ಕುರಿಗಳನ್ನು ಪತ್ತೆಹಚ್ಚುವಲ್ಲಿ ಗುತ್ತಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕಳುವಾದ ಕುರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಗುತ್ತಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

