ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳು ಬಾಲಕನೊಬ್ಬನ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕನ ಸ್ಥಿತಿ ಗಂಭೀರವಾಗಿದೆ. ಹಳೇ ಹುಬ್ಬಳ್ಳಿಯ ವಾರ್ಡ್ ನಂಬರ್ 77ರಲ್ಲಿ ಬರುವ ಅಲ್ತಾಫ್ ಪ್ಲಾಟ್ನಲ್ಲಿ ಘಟನೆ ನಡೆದಿದ್ದು, ಬಾಲಕ ಅಜಾನ್ ಮೊಹಮ್ಮದ್ ಅಲಿ ಹುರಳಿಕುಪ್ಪಿ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿವೆ. ಹೌದು.. ಬೀದಿ ನಾಯಿಗಳು ಬಾಲಕನ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದ್ದು, ಮುಖ ಹಾಗೂ ದೇಹದ ಭಾಗಕ್ಕೆ ಕಚ್ಚಿದ್ದು, ಬಾಲಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಅವಳಿನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕಿದ್ದ ಪಾಲಿಕೆ ನಿರ್ಲಕ್ಷ್ಯಕ್ಕೆ ಇನ್ನೇಷ್ಟು ಅನಾಹುತಗಳು ಸಂಭವಿಸುತ್ತವೆಯೋ ಎಂಬುದನ್ನು ಕಾದುನೋಡಬೇಕಿದೆ.

