ಹುಬ್ಬಳ್ಳಿಯ ಚಂದ್ರಕಲಾ ಟಾಕೀಸ್ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಾತ್ರಿ ಸುಮಾರು 11:15ರ ವೇಳೆಗೆ ಬೈಕ್ ಸವಾರ ಅಪಘಾತಕ್ಕೀಡಾಗಿ, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ತೀವ್ರ ಗಾಯವಾಗಿದ್ದು, ಕಾಲು ಕಟ್ ಆಗಿರುವುದಾಗಿ ತಿಳಿದುಬಂದಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

