ಹುಬ್ಬಳ್ಳಿ: 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಅಶೋಕ ಕಾಟವ ಅವರು ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆಯಲು ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಪ್ರಾಣತ್ಯಾಗ ಮಾಡಿದ್ದು, ಅವರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಈ ಸ್ವಾತಂತ್ರ್ಯವನ್ನು ಕೇವಲ ಸಂಭ್ರಮಿಸುವುದಕ್ಕೆ ಸೀಮಿತಗೊಳಿಸದೆ, ಅದರ ಮಹತ್ವವನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು. ಮುಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರೂ ಉತ್ತಮ ಪ್ರಜೆಯಾಗುವುದರ ಜೊತೆಗೆ ದೇಶದ ಏಕತೆ, ಅಭಿವೃದ್ಧಿ ಹಾಗೂ ಪ್ರಗತಿಗೆ ಕೈಜೋಡಿಸಬೇಕು. ನಮ್ಮೆಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಭಾರತವನ್ನು ಮತ್ತಷ್ಟು ಸದೃಢ ಹಾಗೂ ಬಲಿಷ್ಠ ರಾಷ್ಟ್ರವನ್ನಾಗಿ ನಿರ್ಮಿಸೋಣ ಎಂದು ಬಿಜೆಪಿ ಯುವ ಮುಖಂಡ ವೆಂಕಟೇಶ್ ಅಶೋಕ ಕಾಟವ ಕರೆ ನೀಡಿದರು.

