ಮುಂಡಗೋಡ: ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಹಿಂದೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು. ಆದರೆ, ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು. ರಮೇಶ್ ಹಾನಾಪುರ್ ಅವರು ತಮ್ಮ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ ಉತ್ತಮ ಅಧಿಕಾರಿಯಾಗಿದ್ದು, ಅವರ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭ್ರಷ್ಟಾಚಾರ ಇತ್ತು. ಆದರೆ, ಈಗ ಭ್ರಷ್ಟಾಚಾರದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಅದರಲ್ಲಿ ರಮೇಶ್ ಹಾನಾಪುರ್ ಅವರ ಶ್ರಮ ಮತ್ತು ಕಾರ್ಯಕ್ಷಮತೆ ಪ್ರಮುಖ ಪಾತ್ರ ವಹಿಸಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು. #Mundgod #policestation #RameshHanapur #shivaramhebbar #uttarakannada #karnatakanews #Public5News #kannadanews #policedepartment #trendingnews

