ಚಿನ್ಮಯ ವಿದ್ಯಾಲಯದ 80ನೇ ಸ್ವಾತಂತ್ರ್ಯ ದಿನಾಚರಣೆ: ಶಿಕ್ಷಣ, ಸಂಸ್ಕೃತಿ ಮತ್ತು ಸಾಧನೆಯ ಸಂಭ್ರಮ ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಚಿನ್ಮಯಿ ವಿದ್ಯಾಲಯವು ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. 1990ರಲ್ಲಿ ರಾಜ್ಯ ಪಠ್ಯಕ್ರಮದೊಂದಿಗೆ ಆರಂಭವಾದ ಈ ಶಾಲೆಯು, 2009ರಲ್ಲಿ ಸಿಬಿಎಸ್ಇ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಿತು. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಈ ವಿದ್ಯಾಲಯವು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದೆ. ಪಠ್ಯ ಶಿಕ್ಷಣದ ಜೊತೆಗೆ ಸಂಗೀತ, ಕರಾಟೆ, ಶ್ಲೋಕ, ಸಂಸ್ಕೃತ ಪಾಠ, ವೇದಿಕ್ ಕ್ಲಾಸ್, ಲೈಫ್ ಸ್ಕಿಲ್ಸ್, ಯೋಗ ಮತ್ತು ಚಿತ್ರಕಲೆ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳೆಸಲಾಗುತ್ತಿದೆ. ಪ್ರಸ್ತುತ ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ಈ ವಿದ್ಯಾಲಯದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಚೆಸ್ನಲ್ಲಿ ಕಂಚಿನ ಪದಕ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೇ, ಹತ್ತನೇ ತರಗತಿಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನವನ್ನು ಪಡೆದು ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಎಲ್ಲ ಸಾಧನೆಗಳ ನಡುವೆ ಚಿನ್ಮಯಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಿಸಲಾಯಿತು. ದೇಶಭಕ್ತಿ, ಸಂಸ್ಕೃತಿ ಮತ್ತು ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ ಚಿನ್ಮಯಿ ವಿದ್ಯಾಲಯವು ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. #chinmayavidyalaya #independenceday #hubli #hublidharwad # #kannada #trendingkannada #newsupdate #indianews #viralnews #kannadaupdates #trendingvideo #publicreaction #ಕನ್ನಡಸುದ್ದಿ #ಇಂದಿನಸುದ್ದಿ #foryou #todaynews #viral

