ಹಾವೇರಿ: ಶಿಗ್ಗಾವಿ ತಾಲೂಕಿನ ತಡಸ್ ಗ್ರಾಮದಲ್ಲಿರುವ ಪೊಲೀಸ್ ಠಾಣೆ ಎದುರು ಬೃಹತ್ ಮರ ಅಪಾಯದ ಸ್ಥಿತಿಯಲ್ಲಿ ನಿಂತಿದೆ. ಮರದ ಹಲವು ದೊಡ್ಡ ಕೊಂಬೆಗಳು ಒಣಗಿ ಹೋಗಿದ್ದು, ಯಾವ ಕ್ಷಣದಲ್ಲಾದರೂ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳ, ಪಾದಚಾರಿಗಳ ಹಾಗೂ ವಾಹನ ಸವಾರರ ಮೇಲೆ ಬೀಳುವ ಆತಂಕ ಎದುರಾಗಿದೆ. ಪ್ರತಿದಿನ ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಪೋಷಕರು ಕೂಡ ಆತಂಕದಲ್ಲಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು, ರಸ್ತೆಗೆ ಅಡ್ಡಿಯಾಗಿರುವ ಒಣಗಿದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. #haveri #studentsafety #publicsafety #hublidharwad #latestnews #kannada #trendingkannada #newsupdate #indianews #viralnews #kannadaupdates #trendingvideo #publicreaction #ಕನ್ನಡಸುದ್ದಿ #ಇಂದಿನಸುದ್ದಿ #foryou #todaynews #viral

