ದಾವಣಗೆರೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹೂವಿನಹಡಗಲಿ ತಾಲ್ಲೂಕಿನ ಕುರುವತ್ತಿ ಗ್ರಾಮದ 17 ವರ್ಷದ ರಂಜಿತಾ ಮೃತ ವಿದ್ಯಾರ್ಥಿನಿ. ಕಳೆದ ಒಂದೂವರೆ ವರ್ಷದಿಂದ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಂಜಿತಾ, ಅಕಾಡೆಮಿ ಹಾಸ್ಟೆಲ್ನಲ್ಲೇ ವಾಸವಾಗಿದ್ದರು. ನಿನ್ನೆ ರಾತ್ರಿ ಹಾಸ್ಟೆಲ್ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.ಆದರೆ, ಮಗಳ ಸಾವು ಆತ್ಮಹತ್ಯೆಯಲ್ಲ ಎಂದು ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಹೊಡೆದು ಕೊಲೆ ಮಾಡಿ ಬಳಿಕ ನೇಣು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಟೀಮ್ ಅಕಾಡೆಮಿ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. #exclusive #sucidecase #davangere #student #teamacademy #pustudent #crime #murder # #hublidharwad #latestnews #kannada #trendingkannada #newsupdate #indianews #viralnews #kannadaupdates #trendingvideo #publicreaction #ಕನ್ನಡಸುದ್ದಿ #ಇಂದಿನಸುದ್ದಿ #foryou #todaynews #viral

